ಕರ್ನಾಟಕ

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತ ಪಟ್ಟ 2 ವರ್ಷದ ಮಗು

ಹಾವೇರಿ,ಸೆ.18: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ 2 ವರ್ಷದ ಮಗುವೊಂದು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ ಕರುಣ್ ಉಪ್ಪೇನಮಾಳೇರ ಎಂಬ ಎರಡು ವರ್ಷದ ಮಗುವಿಗೆ 15 ದಿನಗಳ ಹಿಂದೆ ನಾಯಿ ಕಚ್ಚಿತ್ತು. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸರಿಯಾಗಿ ಚಿಕಿತ್ಸೆ ಸಿಕ್ಕಿಲ್ಲ. ಹೀಗಾಗಿ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಇದರಿಂದ ಗ್ರಾಮಸ್ಥರು ಆಸ್ಪತ್ರೆಗೆ ನುಗ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿದರು. ( ವರದಿ.ಪಿಜೆ )

Leave a Reply

comments

Related Articles

error: