ಸುದ್ದಿ ಸಂಕ್ಷಿಪ್ತ

ಸೆಪ್ಟೆಂಬರ್ 20 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ಮೈಸೂರು, ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 9-30 ಗಂಟೆಗೆ ನಜರ್‍ಬಾದ್ ಎನ್.ಪಿ.ಸಿ. ಆಸ್ಪತ್ರೆ ಆವರಣದಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಜಾಥಾಕ್ಕೆ ಚಾಲನೆ ನೀಡುವರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಬಿ. ಬಸವರಾಜು ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ:ಪಶುಪತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞರಾದ ಡಾ: ನರೇಂದ್ರ ಎ.ಆರ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

(ಎನ್.ಬಿ)

Leave a Reply

comments

Related Articles

error: