ಮೈಸೂರು

ನ.1ರಂದು ಉತ್ತರ ಕರ್ನಾಟಕದಲ್ಲಿ ಕನ್ನಡ ಕಟ್ಟಿದ ಮಹನೀಯರು : ವಿಚಾರ ಸಂಕಿರಣ

ಸ್ವಪ್ನ ಬುಕ್ ಹೌಸ್ ನ 50ನೇ ವಾರ್ಷಿಕೋತ್ಸವದಂಗವಾಗಿ ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಉತ್ತರ ಕರ್ನಾಟಕದಲ್ಲಿ ಕನ್ನಡ ಕಟ್ಟಿದ ಮಹನೀಯರು ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಸ್ವಪ್ನ ಬುಕ್ ಹೌಸ್ ಕನ್ನಡ ವಿಭಾಗದ ವ್ಯವಸ್ಥಾಪಕ ದೊಡ್ಡೇಗೌಡ ತಿಳಿಸಿದರು.

ಅವರು, ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ನ.1ರ ಮಂಗಳವಾರ, ಬೆಳಿಗ್ಗೆ 10 ಗಂಟೆಗೆ, ಬೆಂಗಳೂರಿನ ಕುಮಾರಪಾರ್ಕ್ ಪೂರ್ವದಲ್ಲಿರುವ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಉದ್ಘಾಟಿಸಲಿದ್ದಾರೆ. ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು, ವಿಚಾರ ಗೋಷ್ಠಿಗಳು ನಡೆಯಲಿದ್ದು ಸಂಜೆ 6 ಗಂಟೆಗೆ ಆಯೋಜಿಸಿರುವ ಹಾಸ್ಯ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್, ನರಸಿಂಹ ಜೋಶಿ, ಬಸವರಾಜ ಮಹಾಮನಿ ಹಾಸ್ಯ ಕಾರ್ಯಕ್ರಮ ನೀಡುವರು.ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.1 ರಿಂದ 30ರ ವರೆಗೆ ಸ್ವಪ್ನ ಬುಕ್ ಹೌಸ್ ನ ಶಾಖೆಗಳಲ್ಲಿ ಕನ್ನಡ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಹೇಳಿದರು.

Leave a Reply

comments

Related Articles

error: