ಮೈಸೂರು

ಬಿಎಸ್ ವೈ-ಪ್ರಸಾದ್ ಭೇಟಿ ರದ್ದು : ನವೆಂಬರ್ 8ಕ್ಕೆ ತಿಳಿಯಲಿದೆ ಪ್ರಸಾದ್ ಮುಂದಿನ ನಡೆ

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವುದು ಬಹುತೇಕ ಖಚಿತ ಎನ್ನುವ ಮಾತುಗಳು ಅವರ ಆಪ್ತವಲಯದಲ್ಲಿ ಕೇಳಿ ಬರುತ್ತಿದೆ.

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಶ್ರೀನಿವಾಸ್ ಪ್ರಸಾದ್ ಅವರನ್ನು ಭಾನುವಾರ ಭೇಟಿಯಾಗಬೇಕಿತ್ತು. ಆದರೆ ಭೇಟಿ ರದ್ದುಗೊಂಡಿದೆ. ನವೆಂಬರ್ 8ರಂದು ನಂಜನಗೂಡಿನಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ  ಸಭೆ ನಡೆಯಲಿದ್ದು, ಅವರ ಅಭಿಪ್ರಾಯದ ಬಳಿಕ ಪ್ರಸಾದ್ ಅವರ ಮುಂದಿನ ಹೆಜ್ಜೆ ತಿಳಿಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಾದ್ ಅವರ ನೈತಿಕತೆಯನ್ನು ಪ್ರಶ್ನಿಸಿದ್ದು, ಅದಕ್ಕೆಲ್ಲ ನವೆಂಬರ್ 8ರಂದು ನಾನು ಉತ್ತರ ನೀಡಲಿದ್ದೇನೆ ಎಂದು ಪ್ರಸಾದ್ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜಾನಾಥ್ ಸಿಂಗ್ ಸೇರಿದಂತೆ ಹಲವರು ಶ್ರೀನಿವಾಸ್ ಪ್ರಸಾದರನ್ನು ಸಂಪರ್ಕಿಸಿ ಪಕ್ಷಕ್ಕೆ ಬರುವಂತೆ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ. ರಾಜಾನಾಥ್ ಸಿಂಗ್ ಬಿಜೆಪಿ ನಾಯಕರು ಅವರ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಬರುವಂತೆ ಕೇಳಿಕೊಂಡಿದ್ದಾರೆ ಎಂದಿದ್ದಾರೆ. ನವೆಂಬರ್ 8ರಂದೇ ಶ್ರೀನಿವಾಸ್ ಪ್ರಸಾದ್ ಅವರ ಮುಂದಿನ ರಾಜಕೀಯ ನಡೆಯೇನು ಎನ್ನುವುದು ತಿಳಿದು ಬರಲಿದೆ.

Leave a Reply

comments

Related Articles

error: