ಮೈಸೂರು

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕಬ್ಬು ಬೆಂಕಿಗಾಹುತಿ

ಮೈಸೂರು,ಸೆ.19:- ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಶಿರಮಳ್ಳಿ ಗ್ರಾಮದ ಬಳಿ ನಡೆದಿದೆ.

ಶಿರಮಳ್ಳಿ ಗ್ರಾಮದ ಬೀರೇಗೌಡ ಎಂಬುವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಕಟಾವಿನ ಹಂತಕ್ಕೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದ್ದರಿಂದ  ರೈತ ಕಂಗಾಲಾಗಿದ್ದಾನೆ. ಕಬ್ಬಿನ ಗದ್ದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: