ಮೈಸೂರು

ಕಾಗುಣಿತ ಕಾದಂಬರಿ ಲೋಕಾರ್ಪಣೆ

ಬದುಕು ಟ್ರಸ್ಟ್ ಮತ್ತು ರೈತ ಸೂರು ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಕಲಾಮಂದಿರದ ಮನೆಯಂಗಳದಲ್ಲಿ ಡಾ.ಎನ್.ಕೆ. ಕೋದಂಡರಾಮ ಅವರ ‘ಕಾಗುಣಿತ’ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಆಂದೋಲನ ದಿನಪತ್ರಿಕೆಯ ಪ್ರಧಾನ ಸಂಪಾದಕ ರಾಜಶೇಖರ ಕೋಟಿ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿದರು. ಹಿರಿಯ ಸಾಹಿತಿ ಪ್ರೊ. ಸಿ. ನಾಗಣ್ಣ ಮಾತನಾಡಿ, ಎಲ್ಲವೂ ಡಿಜಿಟಲ್ ಮಯವಾಗುತ್ತಿರುವ ಇಂದಿನ ದಿನಗಳಲ್ಲಿ ಇಂತಹ ರೈತಪರ ಬರವಣಿಗೆಗಳು ಬೆಳಕಿಗೆ ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಶುಭ ಸಮಾರಂಭಗಳಿಗೆ, ಹುಟ್ಟುಹಬ್ಬದ ಕಾರ್ಯಕ್ರಮಗಳಿಗೆ ಇಂತಹ ಪುಸ್ತಕಗಳನ್ನು ಕೊಡುಗೆಯಾಗಿ ನೀಡುವುದರಿಂದ ಇತರರಿಗೂ ಉಪಯೋಗವಾಗುತ್ತದೆ. ಪುಸ್ತಕದ ಕರ್ತೃವಿಗೂ ಸಮಾಧಾನ ಸಿಕ್ಕಂತಾಗುತ್ತದೆ. ಅಲ್ಲದೇ ನಮ್ಮ ಯುವಜನತೆ ಕನ್ನಡವನ್ನು ಉಳಿಸಿ ಬೆಳೆಸುವ  ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ಸಾಂಸ್ಕೃತಿಕ ವಿಶ್ವವಿದ್ಯಾನಿಲಯದ ಕುಲಪತಿ ಪದ್ಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: