ಸುದ್ದಿ ಸಂಕ್ಷಿಪ್ತ

ಶ್ರೀಕೋಟೆ ಮಾರಿಯಮ್ಮ ಯುವಕ ಮಂಡಳಿ: ನಾಳೆ ನೂತನ ಕಟ್ಟಡ ಉದ್ಘಾಟನೆ

ಮಡಿಕೇರಿ,ಸೆ.19-ನಗರದ ಶ್ರೀಕೋಟೆ ಮಾರಿಯಮ್ಮ ದೇವಾಯದ ಬಳಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆ.21 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.
ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಂಡೀರ ಸದಾ ಮುದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್‍ಸಿಂಹ, ಮಾಜಿ ಸಚಿವರಾದ ಟಿ.ಜಾನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷರಾದ ಕಾವೇರಮ್ಮಸೋಮಣ್ಣ, ಉಪಾಧ್ಯಕ್ಷರಾದ ಟಿ.ಎಸ್. ಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ನಗರ ಸಭಾ ಸದಸ್ಯರಾದ ಪ್ರಕಾಶ್‍ಆಚಾರ್ಯ, ಐಎನ್‍ಟಿಯುಸಿ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ, ದಸರಾ ದಶಮಂಟಪ ಸಮಿತಿ ಅಧ್ಯಕ್ಷರಾದ ಸತೀಶ್ ಧರ್ಮಪ್ಪ, ಉದ್ಯಮಿಗಳಾದ ಪ್ರಸನ್ನ ಭಟ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ ಹಾಗೂ 9.30 ಕ್ಕೆ ಕರಗ ದೇವತೆಗಳ ಆರಾಧನೆ ನೆರವೇರಲಿದೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: