ಮೈಸೂರು

ಪ್ಲೈವುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಮೈಸೂರಿನ ಮೇಟಗಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ  ಬುಧವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಪ್ಲೈವುಡ್ ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಪ್ರೇಮ್ ಇಂಡಸ್ಟ್ರೀನಲ್ಲಿ ಬುಧವಾರ ಬೆಳಗಿನ ಜಾವ ನಾಲ್ಕುಗಂಟೆಯ ಸುಮಾರಿಗೆ ಅಗ್ನಿ ಕಾಣಿಸಿಕೊಂಡಿದ್ದು, ಕಾರ್ಖಾನೆಯ ಭದ್ರತಾ ಸಿಬ್ಬಂದಿ ಬೆಂಕಿಯನ್ನು ವೀಕ್ಷಿಸಿದ್ದು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ.  ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲೈವುಡ್ ಗಳು ಸುಟ್ಟು ಸಂಪೂರ್ಣ ಕರಕಲಾಗಿದ್ದು, ಈ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬೇಕೆಂದು ಶಂಕಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಯು 500ಮೀಟರ್ ವರೆಗೂ ವ್ಯಾಪಿಸಿತ್ತು.

ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

comments

Related Articles

error: