ಕರ್ನಾಟಕ

ಅರ್ಥಪೂರ್ಣ ವಾಲ್ಮೀಕಿ ಜಯಂತಿಯ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಮಡಿಕೇರಿ,ಸೆ.20-ಜಿಲ್ಲಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.5 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಮಾಜದ ಬಾಂಧವರು ಸಹಕರಿಸಬೇಕು ಎಂದು ಮನವಿ ಮಾಡಿರಲ್ಲದೆ, ಮಹರ್ಷಿ ವಾಲ್ಮೀಕಿ ಅವರ ಜನ್ಮ ಜಯಂತಿಯನ್ನು ಅಚ್ಚುಕಟ್ಟಾಗಿ ಏರ್ಪಡಿಸುವಂತಾಗಬೇಕು. ಕಳೆದ ಬಾರಿಯಂತೆ ಈ ಬಾರಿಯೂ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ಪ್ರೋತ್ಸಾಹ ಧನ ನೀಡುವುದು. ಗಿರಿಜನ ಸಮುದಾಯದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವುದು ಹಾಗೆಯೇ ವಾಲ್ಮೀಕಿ ಜಯಂತಿಯಂದು ಭಾಷಣ ಮಾಡಲು ವಿಶೇಷ ಆಹ್ವಾನಿತರ ಹೆಸರು ಸೂಚಿಸುವಂತಾಗಬೇಕು. ಜೊತೆಗೆ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದರು.
ವಾಲ್ಮೀಕಿ ಸಮಾಜದ ಜಿಲ್ಲಾ ಕಾರ್ಯದರ್ಶಿ ಅಶೋಕ್ ಅವರು ಮಾತನಾಡಿ ಕುಶಾಲನಗರದಲ್ಲಿ ನಿರ್ಮಾಣ ಮಾಡಲಾಗಿರುವ ವಾಲ್ಮೀಕಿ ಭವನ ನಿರ್ವಹಣೆಯನ್ನು ಸಮಾಜಕ್ಕೆ ಬಿಟ್ಟುಕೊಡುವಂತಾಗಬೇಕು ಎಂದು ಅವರು ಮನವಿ ಮಾಡಿದರು.

ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್ ಅವರು ಕಾರ್ಯಕ್ರಮ ಆಯೋಜನೆ ಬಗ್ಗೆ ಹಲವು ಮಾಹಿತಿ ನೀಡಿದರು. ಜಿ.ಪಂ.ಸದಸ್ಯರಾದ ಕುಮಾರ್, ವಾಲ್ಮೀಕಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷರಾದ ಮಲ್ಲಪ್ಪ, ಸಂಘಟನಾ ಕಾರ್ಯದರ್ಶಿ ಚಂದ್ರು, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ರಾಜು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: