ಸುದ್ದಿ ಸಂಕ್ಷಿಪ್ತ

ಸೆ.23 ಮ್ಯಾರಥಾನ್ ಓಟಕ್ಕೆ ಚಾಲನೆ

ಮಡಿಕೇರಿ,ಸೆ.20-ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಸೆ.23 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮ್ಯಾರಥಾನ್ ಓಟಕ್ಕೆ ಮಡಿಕೇರಿ ಡಿವೈಎಸ್‍ಪಿ ಸುಂದರ್‍ರಾಜ್ ಅವರು ಚಾಲನೆ ನೀಡಲಿದ್ದಾರೆ.
ಸೆ.24 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ನಗರಸಭೆ ಆಯುಕ್ತರಾದ ಶುಭಾ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ಹಾಗೂ ನಗರ ದಸರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಸೆ.26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಶಾಸಕರಾದ ಅಪ್ಪಚ್ಚುರಂಜನ್ ಅವರು ಕಬ್ಬಡಿ ಪಂದ್ಯಾವಳಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಶಾಸಕರಾದ ವೀಣಾ ಅಚ್ಚಯ್ಯ ನಗರಸಭೆ ಉಪಾಧ್ಯಕ್ಷರಾದ ಟಿ.ಎನ್.ಪ್ರಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ಬಿ.ಕೆ.ಜಗದೀಶ್ ಅವರು ತಿಳಿಸಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: