ಕರ್ನಾಟಕ

 ‘ಪ್ರಜಾಸತ್ಯ’ ದಿನಪತ್ರಿಕೆಯ ದ್ವಿತೀಯ ವಾರ್ಷಿಕೋತ್ಸವ : ಸಾಧಕರಿಗೆ ಸನ್ಮಾನ

ರಾಜ್ಯ(ಮಡಿಕೇರಿ) ಸೆ.20 :- ಪ್ರಜಾಸತ್ಯ’ ದಿನ ಪತ್ರಿಕೆಯ ದ್ವಿತೀಯ ವಾರ್ಷಿಕೋತ್ಸವ ಸೆ.22 ರಂದು ಪೂರ್ವಾಹ್ನ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಉದ್ಘಾಟಿಸಲಿದ್ದು ‘ಪ್ರಜಾಸತ್ಯ’ ದಿನಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ಸಿ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಿಕೆಯ ಹಿರಿಯ ವರದಿಗಾರ ಬಿ.ಸಿ.ದಿನೇಶ್ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ಚಾಮರಾಜ ವಿಧಾನಸಭಾ ಕ್ಷೇತ್ರ ಶಾಸಕ ಮತ್ತು ಪತ್ರಿಕೋದ್ಯಮಿ ವಾಸು, ಮಡಿಕೇರಿ ವಿಧಾನ ಸಭಾ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್,ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾಅಚ್ಚಯ್ಯ, ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಪಿ.ರಾಜೇಂದ್ರಪ್ರಸಾದ್ ಹಾಗೂ ವಾರ್ತಾಧಿಕಾರಿ ಚಿನ್ನಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪತ್ರಿಕೆಯ ಜಾಹಿರಾತು ವ್ಯವಸ್ಥಾಪಕರಾದ ಹರ್ಷಿತ್ ಹಾಗೂ ವಿನ್ಯಾಸಕರಾದ ವಿನೋದ್ ಕುಮಾರ್ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: