
ಮೈಸೂರು
ಸೆ.22ರಂದು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಮೈಸೂರು,ಸೆ.20 : ವಾಲ್ಮೀಕಿ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಸೆ.22ರಂದು ಮಧ್ಯಾಹ್ನ 12 ಗಂಟೆಗೆ ವಿಜಯನಗರದ 2ನೇ ಹಂತದ ಹಿನಕಲ್ ಬಳಿಯ ವಾಲ್ಮೀಕಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಅಕ್ಟೋಬರ್ 5ರಂದು ವಿಧಾನಸೌಧದ ಮುಂಭಾಗ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಭಾ ಹಾಗೂ ಸಮುದಾಯ ಸಂಘ ಸಂಸ್ಥೆಗಳು ಜಂಟಿಯಾಗಿ ಹಮ್ಮಿಕೊಂಡಿದೆ.
ವಾಲ್ಮೀಕಿ ಜಯಂತಿ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಸಚಿವ ರಮೇಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಸಿದ್ದರಾಜು, ಮಾಜಿ ಶಾಸಕ ಚಿಕ್ಕಣ್ಣ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಬೇಕೆಂದು ಕಾರ್ಯದರ್ಶಿ ಕೆ.ಎನ್.ಅನಿಲ್ ಕುಮಾರ್ ಕೋರಿದ್ದಾರೆ. (ಕೆ.ಎಂ.ಆರ್)