ಕರ್ನಾಟಕ

ಬಸವನಹಳ್ಳಿ, ಬ್ಯಾಡಗೊಟ್ಟ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ,ಸೆ.20-ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕುಶಾಲನಗರ ಬಳಿಯ ಬಸವನಹಳ್ಳಿ ಮತ್ತು ಬ್ಯಾಡಗೋಟ್ಟ ಗಿರಿಜನ ನಿರಾಶ್ರಿತ ಪ್ರದೇಶಗಳಿಗೆ ಬುಧುವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ನಿರಾಶ್ರಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಬಡಾವಣೆ ರಚನೆ, ಚರಂಡಿ ಹಾಗೂ ರಸ್ತೆ ನಿರ್ಮಾಣ, ಅಂಗನವಾಡಿ ಕೆಂದ್ರ ಮತ್ತಿತರ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಿದರು. ನಿರಾಶ್ರಿತರಿಗೆ 3.90 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲಾಗುತ್ತಿದ್ದು, ಉತ್ತಮ ಗುಣಮಟ್ಟದ ಮನೆ ನಿರ್ಮಿಸಿಕೊಳ್ಳುವಂತೆ ನಿರಾಶ್ರಿತರಿಗೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಸಮಗ್ರ ಗಿರಿಜನ ಇಲಾಖೆಯ ಯೋಜನಾಧಿಕಾರಿಯಾದ ಬಿ.ಎನ್.ಪ್ರಕಾಶ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪ್ರಮುಖರಾದ ಎಸ್.ಎನ್.ರಾಜಾರಾವ್, ತಹಸಿಲ್ದಾರ ಮಹೇಶ್ ಇತರರು ಹಾಜರಿದ್ದರು. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: