ಮೈಸೂರು

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ : ಐವರು ಮಹಿಳೆಯರ ರಕ್ಷಣೆ; ಮೂವರು ಪುರುಷರ ಬಂಧನ

ಮೈಸೂರು,ಸೆ.21:- ಖಚಿತ ಮಾಹಿತಿಯ ಮೇರೆಗೆ ಹೈಟೆಕ್ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಐವರು ಮಹಿಳೆಯರನ್ನು ರಕ್ಷಿಸಿ ಮೂವರು ಪುರುಷರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಎಸಿಪಿ ಗೋಪಾಲ್ ನೇತೃತ್ವದ ತಂಡ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ್ದು, ಬೇರೆ, ಬೇರೆ ರಾಜ್ಯದ ಐವರು ಮಹಿಳೆಯರನ್ನು ರಕ್ಷಿಸಿ, ಕೇರಳದ  ಇಬ್ಬರು ಹಾಗೂ ಮೈಸೂರಿನ ಓರ್ವ ಪುರುಷನನ್ನು ಬಂಧಿಸಿದ್ದಾರೆ. ಮಹಿಳೆಯರನ್ನು ಶಕ್ತಿಧಾಮಕ್ಕೆ ಕಳುಹಿಸಲಾಗಿದೆ. ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: