ಪ್ರಮುಖ ಸುದ್ದಿಮೈಸೂರು

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ ನಿತ್ಯೋತ್ಸವ ಕವಿ

ಮೈಸೂರು,ಸೆ.21:- ಸಂಸ್ಕೃತಿ, ಸಂಪ್ರದಾಯವನ್ನು ಬೀರುವ ವಿಶ್ವವಿಖ್ಯಾತ ನಾಡಹಬ್ಬ 407ನೇ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಪುಷ್ಪಾರ್ಚನೆ ಗೈಯ್ಯುವ ಮೂಲಕ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಅತಿಥಿಗಳನ್ನು ಪೂರ್ಣಕುಂಭ ಹಾಗೂ ಕಲಾತಂಡಗಳ ಮೂಲಕ ಬರಮಾಡಿಕೊಳ್ಳಲಾಯಿತು. ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ, ಕವಿ ನಿಸಾರ್ ಅಹಮದ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟದ ಪ್ರಧಾನ ಅರ್ಚಕರು ಸಿಎಂ ಹಾಗೂ ಕವಿ ನಿಸಾರ್ ಅಹಮದ್ ಅವರಿಗೆ ಹೂವಿನ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿದರು.

ಸಚಿವರಾದ ಉಮಾಶ್ರೀ, ಡಾ.ಎಚ್.ಸಿ.ಮಹದೇವಪ್ಪ, ಯು.ಟಿ.ಖಾದರ್, ತನ್ವೀರ್ ಸೇಠ್, ಶಾಸಕ ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಸಂಸದರಾದ ಪ್ರತಾಪಸಿಂಹ, ಧ್ರುವನಾರಾಯಣ್, ಮೇಯರ್ ಎಂ.ಜೆ.ರವಿಕುಮಾರ್, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್ ನಜೀರ್ ಅಹಮದ್, ಜಿಲ್ಲಾಧಿಕಾರಿ ಡಿ.ರಂದೀಪ್, ಡಾ.ಯತೀಂದ್ರ ಸಿದ್ದರಾಮಯ್ಯ ಇತರರು ಉಪಸ್ಥಿತರಿದ್ದರು.

ಇದೇ ವೇಳೆ ದಸರಾ ಕ್ರೀಡಾ ಜ್ಯೋತಿ ಯನ್ನು ಸಿಎಂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಹಸ್ತಾಂತರಿಸಿದರು. ಪ್ರಮೋದ್ ಮಧ್ವರಾಜ್ ಅವರು ಕ್ರೀಡಾ ಜ್ಯೋತಿಯನ್ನು ಚೆಸ್ ಗ್ರಾಂಡ್ ಮಾಸ್ಟರ್ ಎಂ.ಎಸ್.ತೇಜ್ ಕುಮಾರ್ ಅವರಿಗೆ ನೀಡಿದರು.  (ಎಂ.ಎನ್,ಎಸ್.ಎಚ್)

Leave a Reply

comments

Related Articles

error: