
ಕರ್ನಾಟಕ
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು
ತುಮಕೂರು.ಸೆ.21: ಸಿದ್ದಗಂಗಾ ಮಠದ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರು ಶ್ರೀಗಳಿಗೆ ಆರೋಗ್ಯ ತಪಾಸಣೆಗಾಗಿ ಮಾಡಲಾಯಿತು.
ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡ ಕಾರಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಎಂದಿನಂತೆ ಇಂದು ಬೆಳಗ್ಗೆ ಶ್ರೀಗಳು ಇಷ್ಠಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸ್ವೀಕರಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಕೆಲವೊಂದು ಪರೀಕ್ಷೆಗಳನ್ನು ನಡೆಸಲು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ. ( ವರದಿ: ಪಿ.ಜೆ )