ಮೈಸೂರು

ನವೆಂಬರ್ 5 : ಎಸ್ ಜೆಸಿಇ ಯಲ್ಲಿ ಪದವಿ ಪ್ರದಾನ ಸಮಾರಂಭ

ಶ್ರೀಶಿವರಾತ್ರೀಶ್ವರ ಮಹಾವಿದ್ಯಾಪೀಠದ ಅಂಗಸಂಸ್ಥೆಯಾದ ಶ್ರೀಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 5ರಂದು ಏಳನೇ ಪದವಿ ಪ್ರದಾನ ಸಮಾರಂಭ ನಡೆಯಲಿದೆ.

ಮೈಸೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಶಶಿಧರ್ ಮಾತನಾಡಿ ನವೆಂಬರ್ 5ರಂದು ಮಧ್ಯಾಹ್ನ 2.30ಕ್ಕೆ ಕಾಲೇಜಿನ ಆವರಣದಲ್ಲಿ  ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಉನ್ನತ ಶ್ರೇಣಿಯೊಂದಿಗೆ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣಪತ್ರವನ್ನು ಜೆ.ಎಸ್.ಎಸ್.ಮಹಾವಿದ್ಯಾಪೀಠದ ಅಧ್ಯಕ್ಷ, ಜಗದ್ಗುರು ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿ ಪ್ರದಾನ ಮಾಡಲಿದ್ದಾರೆ. ಪುಣೆಯ ಭಾರತ ಫೋರ್ಜ್ ಲಿಮಿಟೆಡ್ ನ ಅಧ್ಯಕ್ಷ, ಪದ್ಮಭೂಷಣ ಬಾಬಾ ಸಾಹೇಬ್ ನೀಲಕಾಂತ ಕಲ್ಯಾಣಿ ಮುಖ್ಯ ಭಾಷಣ ಮಾಡಲಿದ್ದು, ಜೆ.ಎಸ್.ಎಸ್.ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ್ ಮಠ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

2015-16ನೇ ವರ್ಷದ ಬಿ.ಇ. ಪದವಿಯ 922, ಎಂಟೆಕ್ ಪದವಿಯ 231, ಎಂಸಿಎ ಪದವಿಯ 58, ಎಂಬಿಎ ಪದವಿಯ 108 ವಿದ್ಯಾರ್ಥಿಗಳು ಸ್ವಾಯತ್ತತೆಯ ನಿಬಂಧನೆಗಳ ಅನುಸಾರ ಪದವಿ ಪ್ರಮಾಣಪತ್ರ ಪಡೆಯಲು ಅರ್ಹರಾಗಿರುತ್ತಾರೆ. ಒಟ್ಟು 42 ಪದಕಗಳನ್ನು ವಿತರಿಸಲಾಗುತ್ತಿದ್ದು, ಪ್ರತಿವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪದವಿ ಹಾಗೂ ಸ್ನಾತಕೋತ್ತರ  ವಿದ್ಯಾರ್ಥಿಗಳಿಗೆ 28ಪದಕಗಳು ಮತ್ತು 14 ದತ್ತಿ ಪದಕಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆ.ಎಸ್.ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿ.ಜಿ.ಸಂಗಮೇಶ್ವರ, ಕುಲಸಚಿವ ಡಾ.ಕೆ.ಎಸ್.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: