
ದೇಶಪ್ರಮುಖ ಸುದ್ದಿ
ಮೈಸೂರಿನ ಲಲಿತ್ ಮಹಲ್ ಹೋಟೆಲ್ ಮತ್ತೆ ರಾಜ್ಯ ಸರ್ಕಾರದ ವಶಕ್ಕೆ : ಅರುಣ್ ಜೇಟ್ಲಿ
ನವದೆಹಲಿ, ಸೆ.20 : ಮೈಸೂರಿನ ಲಲಿತ್ ಮಹಲ್ ಪ್ಯಾಲೆಸ್ ಹೋಟೆಲ್ ಅನ್ನು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾನತಾಡಿದ ಜೇಟ್ಲಿ ಅವರು, “ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 1931ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿದ ಈ ಲಲಿತ್ ಮಹಲ್ ಪ್ಯಾಲೇಸ್ ಅನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಂಟಿಯಾಗಿ ನಿರ್ವಹಣೆ ಮಾಡುತ್ತಿದ್ದವು. ಇದೀಗ ಸಂಪೂರ್ಣವಾಗಿ ರಾಜ್ಯ ಸರಕಾರಕ್ಕೆ ಈ ಹೋಟೇಲ್ ಅನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮೈಸೂರಿನ ಲಲಿತ್ ಮಹಲ್ ಪ್ಯಾಲೆಸ್ನಂತೆಯೇ ಕೇಂದ್ರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ವಹಣೆಯಲ್ಲಿರುವ ಹೋಟೆಲ್ ಜೈಪುರ್ ಅಶೋಕ್ ಅನ್ನೂ ರಾಜಸ್ಥಾನ ಸರಕಾರಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಜೇಟ್ಲಿ ತಿಳಿಸಿದರು.
ರೈಲ್ವೇ ನೌರರರಿಗೆ ದಸರಾ ಬೋನಸ್ !
ಇದೇ ಸಂದರ್ಭ ಸಂಪುಟ ಸಭೆಯಲ್ಲಿ ಕೇಂದ್ರ ರೈಲ್ವೇ ನೌಕರರಿಗೆ ದಸರಾ ಉಡುಗೊರೆಯಾಗಿ ಬೋನಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಜೇಟ್ಲಿ ಘೋಷಿಸಿದರು.
(ಎನ್.ಬಿ)