ಮನರಂಜನೆ

`ಪದ್ಮಾವತಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮುಂಬೈ,ಸೆ.21-ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರ `ಪದ್ಮಾವತಿ’ ಚಿತ್ರದಲ್ಲಿನ ತಮ್ಮ ಪಾತ್ರದ ಫಸ್ಟ್ ಲುಕ್ ಅನ್ನು ನಟಿ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪದ್ಮಾವತಿ ಚಿತ್ರದಲ್ಲಿ ದೀಪಿಕಾ ಪಡುಕೋಣೆ ರಾಜಮನೆತನದ ರಾಣಿಯಾಗಿ ಸಾಂಪ್ರದಾಯಿಕ ಉಡುಗೆ-ತೊಡುಗೆ ಧರಿಸಿ ನಮಸ್ಕರಿಸುತ್ತಿರುವ ಚಿತ್ರದ ಎರಡು ಪೋಸ್ಟರ್ ಗಳನ್ನು ದೀಪಿಕಾ ಗುರುವಾರ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿತ್ರದಲ್ಲಿ ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪದ್ಮಾವತಿ ಡಿಸೆಂಬರ್ 1 ರಂದು ತೆರೆಕಾಣಲಿದೆ. ಭಾರತದಲ್ಲಿ 8 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪದ್ಮಾವತಿ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಣ ಸಂಸ್ಥೆ ವಯಕಾಂ 18 ಸಿದ್ಧತೆ ನಡೆಸಿಕೊಂಡಿದೆ. (ವರದಿ-ಎಂ.ಎನ್)

 

Leave a Reply

comments

Related Articles

error: