ಸುದ್ದಿ ಸಂಕ್ಷಿಪ್ತ
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಳೆ ಚಾಲನೆ
ಮಡಿಕೇರಿ, ಸೆ.21 :- ಮಡಿಕೇರಿ ದಸರಾ ಅಂಗವಾಗಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶುಕ್ರವಾರ ಸಂಜೆ 6.30 ಗಂಟೆಗೆ ಚಾಲನೆ ದೊರೆಯಲಿದೆ.
ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭಾಧ್ಯಕ್ಷೆ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಮಡಿಕೇರಿ ನಗರ ದಸರಾ ಸಮಿತಿ ಕಾಯಾ9ಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮೂಡಾ ಅಧ್ಯಕ್ಷ ಎ.ಸಿ.ದೇವಯ್ಯ, ನಗರಸಭೆಯ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್, ದಸರಾ ಸಮಿತಿ ಖಚಾಂಜಿ ಸಂಗೀತಾ ಪ್ರಸನ್ನ, ದಸರಾ ಸಮಿತಿ ಗೌರವ ಕಾರ್ಯದರ್ಶಿ, ಪೌರಾಯುಕ್ತೆ ಬಿ.ಶುಭಾ ಪಾಲ್ಗೊಳ್ಳಲಿದ್ದಾರೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)