
ಕರ್ನಾಟಕ
ಪೊಲೀಸ್ ಸಿಬ್ಬಂದಿ ಅಮಾನತಿಗೆ ಯುವ ಮೋರ್ಚಾ ಒತ್ತಾಯ
ರಾಜ್ಯ(ಮಡಿಕೇರಿ) ಸೆ.21 :-ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿದ ಆರೋಪವನ್ನು ಎದುರಿಸುತ್ತಿರುವ ಪೊನ್ನಂಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸಮೀರ್ ಅವರನ್ನು ಅಮಾನತುಗೊಳಿಸಬೇಕೆಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಕಾಳನ ರವಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದರೂ ಸಿಬ್ಬಂದಿ ಸಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸೂರಜ್ ತಿಮ್ಮಯ್ಯ ಹಾಗೂ ಪ್ರಶಾಂತ್ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)