ಮೈಸೂರು

ಬರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿ: ಡಿಸಿ ರಂದೀಪ್

ಕೇಂದ್ರ ಬರ ಅಧ್ಯಯನ ತಂಡವು ನ.4ರಂದು ಜಿಲ್ಲೆಯ ಮೈಸೂರು, ಎಚ್‍.ಡಿ.ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಲಿದೆ. ತಹಸೀಲ್ದಾರ್‍ಗಳು ಬರ ಅಧ್ಯಯನ ತಂಡಕ್ಕೆ ಅಗತ್ಯವಿರುವ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಮೈಸೂರು, ಎಚ್‍.ಡಿ.ಕೋಟೆ, ಪಿರಿಯಾಪಟ್ಟಣ ಮತ್ತು ಹುಣಸೂರು ತಾಲೂಕುಗಳಲ್ಲಿ ಅಧ್ಯಯನ ನಡೆಸಲಿದ್ದಾರೆ. ಮಳೆ ವಿವರ, ಬೆಳೆ ನಷ್ಟ, ರಾಸುಗಳ ಸಂಖ್ಯೆ, ಮುಂತಾದ ವಿವರಗಳನ್ನು ಕೇಳುವ ಸಾಧ್ಯತೆಗಳಿದ್ದು, ವಿವರಗಳೊಂದಿಗೆ ಅಧಿಕಾರಿಗಳು ಸಿದ್ಧವಿರಬೇಕೆಂದರು.

ಸರಕಾರದ ವತಿಯಿಂದ ನ.10ರಂದು ಟಿಪ್ಪು ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲಾಗುವುದು. ಗ್ರಾಪಂ ಮಟ್ಟದಲ್ಲಿ ಆಚರಿಸಲು ಅನುಮತಿ ಇರುವುದಿಲ್ಲ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ  ಟಿ.ವೆಂಕಟೇಶ್, ಮೈಸೂರು ಉಪ ವಿಭಾಗಾಧಿಕಾರಿ, ಆನಂದ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಕಲಾ ಕೃಷ್ಣಸ್ವಾಮಿ, ಮೈಸೂರು ನಗರ ಉಪ ಪೊಲೀಸ್ ಆಯುಕ್ತ ಎಚ್.ಟಿ. ಶೇಖರ್ ಉಪಸ್ಥಿತರಿದ್ದರು.

Leave a Reply

comments

Related Articles

error: