ಕರ್ನಾಟಕ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ!

ಬೆಳಗಾವಿ,ಸೆ.2: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ  ಜಿಲ್ಲೆಯಲ್ಲಿ ರಾಯಭಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

ಆರೋಪಿಯನ್ನು ಉದಪ್ಪ ಗಾಣಿಗೇರ

ಕಾಮುಕ ಆರೋಪಿಯನ್ನು ಉದಪ್ಪ ಗಾಣಿಗೇರ(25) ಎಂಬುವುದಾಗಿ ಗುರುತಿಸಲಾಗಿದೆ. ಈತ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಮನೆ ಪಕ್ಕದ ತಿಪ್ಪೆಯಲ್ಲಿ ಹೂತು ಹಾಕಿದ್ದನು. ಇತ್ತ ಬಾಲಕಿ ಕಾಣದಿದ್ದಾಗ ಅಕ್ಕ ಪಕ್ಕದವರನ್ನು ಬಾಲಕಿಯ ಮನೆಯವರು ವಿಚಾರಿಸಿದಾಗ ಈ ಘಟನೆ ನಡೆದಿರೋ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ( ವರದಿ: ಪಿಜೆ )

Leave a Reply

comments

Related Articles

error: