ಪ್ರಮುಖ ಸುದ್ದಿ

ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ಹೈ ಕೋರ್ಟ್ ಮದ್ಯಂತರ ತಡೆಯಾಜ್ಞೆ

ಪ್ರಮುಖ ಸುದ್ದಿ, ಬೆಂಗಳೂರು, ಸೆ.೨೨: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್‌ನಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಎಸಿಬಿ ಎಫ್‌ಐಆರ್ ದಾಖಲಿಸಿತ್ತು. ಈ ಸಂಬಂಧ ಬಿಎಸ್‌ವೈ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇಷ್ಟು ವಿಳಂಬವಾಗಿ ಎಫ್‌ಐಆರ್ ದಾಖಲಿಸಿರುವುದು ಯಾಕೆ. ಅಲ್ಲದೆ ಪ್ರಾಥಮಿಕ ವರದಿಯಲ್ಲಿ ಆರೋಪ ಸಾಬೀತು ಪಡಿಸುವ ಯಾವುದೇ ದಾಖಲೆಗಳಿಲ್ಲ. ಡಿನೋಫಿಕೇಷನ್ ಮಾಡಿದ್ದರಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಯಡಿಯೂರಪ್ಪ ಲಾಭ ಮಾಡಿಕೊಂಡಿದ್ದಾರೆ ಎಂಬುದಕ್ಕೂ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಮದ್ಯಂತರ ತಡೆಯಾಜ್ಞೆ ನೀಡಿದೆ. ಕೋರ್ಟ್‌ನ ಈ ಆದೇಶದಿಂದ ಯಡಿಯೂರಪ್ಪ ಅವರಿಗೆ ಅಲ್ಪ ರಿಲೀಪ್ ಸಿಕ್ಕಿದೆ. (ವರದಿ ಬಿ.ಎಂ)

Leave a Reply

comments

Related Articles

error: