ಸುದ್ದಿ ಸಂಕ್ಷಿಪ್ತ
ಸಮಾವೇಶ ಪೂರ್ವಭಾವಿ ಸಭೆ ಸೆ.24ಕ್ಕೆ
ಮೈಸೂರು,ಸೆ.22 : ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿಸಿ ನೌಕರರ ಸಂಘದ ಮೈಸೂರು ವಿಭಾಗೀಯ ಸಮಾವೇಶದ ಪೂರ್ವಭಾವಿ ಸಭೆಯನ್ನು ಸೆ.24ರ ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದೆ.
ಸದರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಪದಾಧಿಕಾರಿಗಳು ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ. (ಕೆ.ಎಂ.ಆರ್)