ಮೈಸೂರು

ನಾಳೆಯಿಂದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ : ಶಾಸಕ ಕಳಲೆ ಕೇಶವಮೂರ್ತಿ

ಮೈಸೂರು, ಸೆ.22:- ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಉಸ್ತುವಾರಿ  ಆದೇಶದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಾಹಿತಿ ಸಂಗ್ರಹ ಹಾಗೂ ಮನೆ ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮವನ್ನು ಮಾಡಬೇಕೆಂಬ ಸೂಚನೆಯಿದೆ. ಅದರಂತೆ ನಂಜನಗೂಡು ಹಾಗೂ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕಳಲೆ ಕೇಶವಮೂರ್ತಿ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದ ಹಂಪಾಪುರ ಗ್ರಾಮದಲ್ಲಿ ನಾಳೆ ಹಮ್ಮಿಕೊಳ್ಳಲಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ 236 ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಾಗವಹಿಸಿ ನಮ್ಮ ಪಕ್ಷದ ಆದೇಶದಂತೆ ಪ್ರತಿ ಗ್ರಾಮಗಳ ಮನೆ ಮನೆಗೆ ತೆರಳಿ 5 ವರ್ಷದಲ್ಲಿ ಮಾಡಿರುವ ಸಾಧನೆಗಳನ್ನು ಮತ್ತು ಪಕ್ಷ ನೀಡಿದ ಬಹುತೇಕ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಶೋಷಿತರು, ಅವಕಾಶ ವಂಚಿತರು ನೊಂದವರಿಗೆ ದನಿಯಾಗಿ ಸಾಮಾಜಿಕ ನ್ಯಾಯದ ಸೂತ್ರವನ್ನು ಅನುಸರಿಸಿ ರಾಜ್ಯದ ಜನತೆಗೆ ನೆಮ್ಮದಿ ಬಾಳನ್ನು ನೀಡಲು ಶ್ರಮಿಸಿದ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಮಾಹಿತಿ ಸಂಗ್ರಹ ಮಾಡಿ ಅದರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷದ ಕೆ.ಪಿ.ಸಿ.ಸಿ. ಕಛೇರಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರುಣಾ ಕ್ಷೇತ್ರದ ಅಧ್ಯಕ್ಷ ರಂಗಸ್ವಾಮಿ, ಜಿ.ಪಂ. ಸದಸ್ಯರಾದ ಲತಾಸಿದ್ದಶೆಟ್ಟಿ, ಪುಷ್ಪಲತಾ ನಾಗೇಶ್‍ರಾಜ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: