ಕರ್ನಾಟಕಪ್ರಮುಖ ಸುದ್ದಿ

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರವು ಅಗತ್ಯ : ಲೋಕಾಯುಕ್ತ ನ್ಯಾಯಮೂರ್ತಿಯವರ ಅಭಿಮತ

ರಾಜ್ಯ(ಚಾಮರಾಜನಗರ) ಸೆ. 22 :-  ಭ್ರಷ್ಟಾಚಾರ ಹಾಗೂ ದುರಾಡಳಿತ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿಯವರಾದ ಪಿ.ವಿಶ್ವನಾಥ್‍ಶೆಟ್ಟಿ  ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿಯವರು ಭ್ರಷ್ಟಾಚಾರ ಕಡಿವಾಣಕ್ಕೆ ನಾಗರಿಕರು ಸಹ ತೀವ್ರ ಗತಿಯಲ್ಲಿ ಪೂರಕವಾಗಿ ಸಹಕರಿಸಬೇಕಿದೆ. ವಿಶೇಷವಾಗಿ ಯುವಜನಾಂಗ ಕೂಡ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ ಎಂದರು.

ರಾಜ್ಯ ಕೇಂದ್ರ ಸರ್ಕಾರ ಹಲವಾರು ಯೋಜನೆಗಳು ಕಾರ್ಯಕ್ರಮಗಳನ್ನು ಜನರ ಸೌಕರ್ಯಕ್ಕಾಗಿ ಅನುಷ್ಠಾನ ಮಾಡುತ್ತಿದೆ. ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಸೌಲಭ್ಯಗಳು ಜನಸಾಮಾನ್ಯರಿಗೆ ಸರಿಯಾಗಿ ಲಭಿಸುತ್ತಿದ್ದೇಯೆ ಎಂಬುದನ್ನು ತೀವ್ರವಾಗಿ ನೋಡಬೇಕಿದೆ. ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಅಧಿಕಾರಿಗಳು ಲೋಪ ಎಸಗುತ್ತಿದ್ದಾರೆಯೆ ಎಂಬ ಬಗ್ಗೆ ಪರಿಶೀಲಿಸಬೇಕಿದೆ ಎಂದರು. ತಾವು ಇದುವರೆಗೆ ರಾಜ್ಯದ 20 ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು ಆಯಾ ಭಾಗದ ಅಧಿಕಾರಿಗಳ ಸಭೆ ನಡೆಸಿ ಜನರಿಗೆ ಅಧಿಕಾರಿಗಳು ಹೇಗೆ ಸ್ಪಂದಿಸುತ್ತಿದ್ದಾರೇ? ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೇಯೆ ? ಎಂಬ ಬಗ್ಗೆ ತಿಳಿದುಕೊಳ್ಳಲಾಗುತ್ತಿದೆ. ಪ್ರಥಮ ಹಂತದಲ್ಲಿ ಅಧಿಕಾರಿಗಳಿಂದ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆಯಲಾಗುತ್ತಿದೆ. ಬಳಿಕ ಜಿಲ್ಲೆಗಳಿಗೆ ತೆರಳಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಲೋಕಾಯುಕ್ತರು ತಿಳಿಸಿದರು. ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಸ್.ಪರಶಿವಮೂರ್ತಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಸುದ್ದಗೋಷ್ಠಿಯಲ್ಲಿ ಹಾಜರಿದ್ದರು. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: