ಸುದ್ದಿ ಸಂಕ್ಷಿಪ್ತ

ಪುಸ್ತಕ ಸಂತೆಗೆ ಚಾಲನೆ

ಮಡಿಕೇರಿ ಸೆ.22 :-ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಯುವ ದಸರಾ ಹಬ್ಬರ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ದ್ವಿತೀಯ ವರ್ಷದ ಪುಸ್ತಕ ಸಂತೆಯನ್ನು ಏರ್ಪಡಿಸಿದ್ದು, ಸೆ.24ರಂದು ಚಾಲನೆ ನೀಡಲಾಗುತ್ತಿದೆ.

ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ.ರಾಜೇಂದ್ರರವರು ಪುಸ್ತಕ ಸಂತೆ ಉದ್ಘಾಟಿಸಲಿದ್ದು, ಪ್ರಸ್‍ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ದಸರಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಜೈನ್, ಸಾಹಿತಿಗಳಾದ ಶೋಭಾ ಸುಬ್ಬಯ್ಯ, ಕಸ್ತೂರಿ ಗೋವಿಂದಮಯ್ಯ ಹಾಗೂ ಹಿರಿಯ ಪತ್ರಕರ್ತರಾದ ಬಿ.ಸಿ.ದಿನೇಶ್ ಅವರು ಭಾಗವಹಿಸಲಿದ್ದಾರೆ.

ಪುಸ್ತಕ ಸಂತೆಯಲ್ಲಿ ಜಿಲ್ಲೆಯ ಬರಹಗಾರರ ಕೃತಿಗಳು, ರಾಜ್ಯದ ಹೆಸರಾಂತ ಸಾಹಿತಿಗಳ ಕನ್ನಡ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವನ್ನು ಮಾಡಲಾವುದು. ಜಿಲ್ಲೆಯ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9742632283 ಸಂಪರ್ಕಿಸಲು ತಿಳಿಸಲಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: