ಸುದ್ದಿ ಸಂಕ್ಷಿಪ್ತ

ಸೆ.27 : ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಡಿಕೇರಿ ಸೆ.22 :-ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು  ಸೆಪ್ಟೆಂಬರ್ 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಮೈಸೂರು ರಸ್ತೆಯಲ್ಲಿರುವ ಕ್ರಿಸ್ಟಲ್ ಹಾಲ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿಯಾದ ಡಿ.ಹೆಚ್.ಶಂಕರಮೂರ್ತಿ, ಮಾಹಿತಿ ತಂತ್ರಜ್ಞಾನ,ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪಸಿಂಹ, ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಿ ಉಪಾಧ್ಯಕ್ಷರಾದ ಎಂ.ಪದ್ಮಿನಿ ಪೊನ್ನಪ್ಪ, ರೇಷ್ಮೆ ಮಾರಾಟ ಮಂಡಳಿ ನಿಯಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷರಾದ ಕವೇರಮ್ಮ ಸೋಮಣ್ಣ, ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಎಸ್.ಸತ್ಯನಾರಾಯಣ ರಾವ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಜಗನ್ನಾಥ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: