ಪ್ರಮುಖ ಸುದ್ದಿಮೈಸೂರು

ಮುಂದಿನ ಚುನಾವಣೆಯಲ್ಲಿ ಜನರಿಂದ ಕಾಂಗ್ರೆಸ್ ಪಕ್ಷ ತಿರಸ್ಕಾರ: ಪ್ರತಾಪ್ ಸಿಂಹ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆರ್‍ಎಸ್‍ಎಸ್‍ ಕಾರ್ಯಕರ್ತರ ಹತ್ಯೆಗಳಿಗೆ ರಾಜ್ಯ ಸರಕಾರವೇ ಹೊಣೆಯಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.

ನಗರದ ವಿದ್ಯಾಶಂಕರಮಠದಲ್ಲಿ ನಡೆದ ಕೃಷ್ಣರಾಜ ಕ್ಷೇತ್ರದ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದೊಳಗಿನ ಗೊಂದಲದಿಂದ ಹಿಂದೆ ಬಿಜೆಪಿ ಅಧಿಕಾರಕ್ಕೆ ಬರುವುದು ತಪ್ಪಿತ್ತು. ಈಗ ಅಂತಹ ಅಸಮಾಧಾನಗಳು ಯಾವುದೂ ಇಲ್ಲ. ಕೇಂದ್ರ ಹಾಗೂ ಈ ಹಿಂದಿನ ಬಿಜೆಪಿ ಸರಕಾರದ ಸಾಧನೆಗಳನ್ನು ಜನತೆಯ ಮುಂದಿಟ್ಟು ಚುನಾವಣೆ ಎದುರಿಸಬೇಕಿದೆ. ಬೂತ್‍ ಮಟ್ಟದಲ್ಲಿ ಕೆಲಸ ಮಾಡುವ ಮೂಲಕ ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಮತ್ತೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಮಾಜಿ ಸಚಿವ ಎಸ್‍.ಎ. ರಾಮದಾಸ್, ಕೆ.ಆರ್.ಕ್ಷೇತ್ರದ ಅಧ್ಯಕ್ಷ ಬಿ.ವಿ. ಮಂಜುನಾಥ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಡಾ.ಬಿ.ಎಚ್. ಮಂಜುನಾಥ್, ಉಪ ಮೇಯರ್ ವನಿತಾ ಪ್ರಸನ್ನ, ನಗರ ಪಾಲಿಕೆ ಸದಸ್ಯರಾದ ಮಾ.ವಿ. ರಾಮಪ್ರಸಾದ್, ಜಗದೀಶ್, ಮಹದೇವಮ್ಮ, ಸೀಮಾ ಪ್ರಸಾದ್, ಶಿವಕುಮಾರ್, ಶಂಕರ್, ಜೋಗಿ ಮಂಜು ಉಪಸ್ಥಿತರಿದ್ದರು.

Leave a Reply

comments

Related Articles

error: