ಮೈಸೂರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲಿ : ಮುಖಂಡರಿಂದ ದೇವರಿಗೆ ವಿಶೇಷ ಪೂಜೆ

ಮೈಸೂರು,ಸೆ.23:- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಶನಿವಾರ ಹೃದಯಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ ಎಂದು ಜೆಡಿಎಸ್ ಮುಖಂಡರು ದೇವರಮೊರೆಡ ಹೋಗಿದ್ದಾರೆ.

ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು  ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮೈಸೂರು ಚಾಮರಾಜ ಕ್ಷೇತ್ರದ ಜೆಡಿಎಸ್ ಟಿಕೇಟ್ ಆಕಾಂಕ್ಷಿ ರಂಗಪ್ಪ ನೇತೃತ್ವದಲ್ಲಿ ದೇವಸ್ಥಾನಕ್ಕೆ ತೆರಳಿದ ಜೆಡಿಎಸ್ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: