
ಕರ್ನಾಟಕ
ಕೃಷಿ ಭಾಗ್ಯ ಯೋಜನೆ : ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು, ಸೆ. 23 : 2017-18 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ತೋಟಗಾರಿಕಾ ಇಲಾಖೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರು ಪಾಲಿಹೌಸ್ ನೆರಳು ಪರದೆ, ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಬರುವ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕರು ಅವರ ಕಛೇರಿಗೆ ಸಂಪರ್ಕಿಸಿ ಸೆ.25 ರಿಂದ ದಿನಾಂಕ ಅ.10 ರೊಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾದಲ್ಲಿ ಫಲಾನುಭವಿಗಳನ್ನು ನಿಯಮಾನುಸಾರ ಲಾಟರಿ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೊಡ್ಡಬಳ್ಳಾಪುರ ತಾಲ್ಲೂಕು 080-27623770, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೇವನಹಳ್ಳಿ ತಾಲ್ಲೂಕು 08027681204, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಹೊಸಕೋಟೆ 080-27904760, ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 080- 27726213 ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
(ಎನ್.ಬಿ)