ಕ್ರೀಡೆಪ್ರಮುಖ ಸುದ್ದಿ

ಭಾರತ – ಇಂಗ್ಲಂಡ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ: ಭಾರತ ಪ್ರವಾಸ ಕೈಗೊಳ್ಳಲಿರುವ ಇಂಗ್ಲಂಡ್ ಜೊತೆಗಿನ ಟೆಸ್ಟ್ ಸರಣಿಗಾಗಿ, ಟೀಂ ಇಂಡಿಯಾ ಸದಸ್ಯರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

5 ಟೆಸ್ಟ್ ಪಂದ್ಯಗಳ ಸರಣಿಯು ನವೆಂಬರ್ 9 ರಿಂದ ಆರಂಭವಾಗಲಿದ್ದು, ಮೊದಲೆರೆಡು ಪಂದ್ಯಗಳಿಗೆ ಟೀಂ ಇಂಡಿಯಾ ಸದಸ್ಯರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಈ ಟೆಸ್ಟ್ ಸರಣಿ ಮೂಲಕ ಹಾರ್ದಿಕ್ ಪಾಂಡ್ಯಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ದೇಶಿಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಗೌತಮ್ ಗಂಭೀರ್, ಈ ಹಿಂದೆ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಒಂದು ಪಂದ್ಯದಲ್ಲಿ ಅರ್ಧ ಶತಕ ಗಳಿಸಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು. ಇದೀಗ ಆಯ್ಕೆ ಸಮಿತಿ ಗೌತಮ್ ಗಂಭೀರ್ ಗೆ ಮತ್ತೊಂದು ಅವಕಾಶ ನೀಡಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಕರ್ನಾಟಕ ಆಟಗಾರ ಕೆಎಲ್ ರಾಹುಲ್ ಇಂಗ್ಲೆಂಡ್ ಸರಣಿಯಲ್ಲಿ ಆಡುತ್ತಿಲ್ಲ.

ಟೀಂ ಇಂಡಿಯಾ ಟೆಸ್ಟ್ ಆಟಗಾರರ ಪಟ್ಟಿ:

ವಿರಾಟ್ ಕೊಹ್ಲಿ, ಗೌತಮ್ ಗಂಭೀರ್, ಮುರಳಿ ವಿಜಯ್, ವೃದ್ಧಿಮಾನ್ ಸಾಹಾ, ಅಜಿಂಕ್ಯಾ ರಹಾನೆ, ಚೇತೇಶ್ವರ ಪೂಜಾರ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಮೊಹಮ್ಮದ್ ಶಮಿ, ಕರುಣ್ ನಾಯರ್, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯಾ, ಇಶಾಂತ್ ಶರ್ಮಾ, ಜಯಂತ್ ಯಾದವ್.

Leave a Reply

comments

Related Articles

error: