ಸುದ್ದಿ ಸಂಕ್ಷಿಪ್ತ

ಆಕ್ಷೇಪಣೆಗೆ ಅವಕಾಶ

ಮಡಿಕೇರಿ ಸೆ.23: -ಪ್ರವಾಸಿಟ್ಯಾಕ್ಸಿ ಯೋಜನೆಯಡಿಯಲ್ಲಿ ವಿವಿಧ ಯೋಜನಾ ವರ್ಷಗಳಲ್ಲಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು  ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇಲ್ಲಿ ಪ್ರಕಟಿಸಲಾಗಿದೆ. ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 28ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇವರಿಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಸಿ.ಜಗನ್ನಾಥ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

 

 

Leave a Reply

comments

Related Articles

error: