ಸುದ್ದಿ ಸಂಕ್ಷಿಪ್ತ

ಸೆ.25 : ಬಹುಭಾಷಾ ಕವಿಗೋಷ್ಠಿ

ಮಡಿಕೇರಿ,ಸೆ.23:- ಮಡಿಕೇರಿ ನಗರ ದಸರಾ ಸಮಿತಿ ಮತ್ತು ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಬಹುಭಾಷಾ ಕವಿಗೋಷ್ಠಿ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ದಸರಾ ಬಹುಭಾಷಾ ಕವಿಗೋಷ್ಠಿ ಅಧ್ಯಕ್ಷರಾದ ಐತಿಚಂಡ ರಮೇಶ್ ಉತ್ತಪ್ಪ, ನಗರ ದಸರಾ ಸಮಿತಿ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ನಗರ ದಸರಾ ಸಮಿತಿ ಕಾರ್ಯಧ್ಯಕ್ಷರಾದ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ, ಖಜಾಂಚಿ ಸಂಗೀತ ಪ್ರಸನ್ನ, ನಗರಸಭೆ ಆಯುಕ್ತರಾದ ಬಿ.ಶುಭಾ, ಪ್ರೆಸ್‍ಕ್ಲಬ್ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ.ಆರ್.ಕುಟ್ಟಪ್ಪ, ಪತ್ರಿಕಾ ಭವನದ ಮ್ಯಾನೇಜಿಂಗ್ ಟ್ರಸ್ಟಿ ಮನುಶೆಣೈ, ಖ್ಯಾತ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಗಿರೀಶ್ ರಾವ್(ಜೋಗಿ), ಮೂವರೆ ರೇಖಾ ಪ್ರಕಾಶ್, ಕೊಟ್ಟಕೇರಿಯನ ಲೀಲಾ ದಯಾನಂದ, ನಾಗೇಶ್ ಕಾಲೂರು ಇತರರು ಭಾಗವಹಿಸಲಿದ್ದಾರೆ. (ಕೆಸಿಐ,ಎಸ್.ಎಚ್)

 

Leave a Reply

comments

Related Articles

error: