ಕರ್ನಾಟಕ

ಶುದ್ದ ಕುಡಿಯುವ ನೀರು ಘಟಕ ಉದ್ಘಾಟಿಸಿದ ಸಂಸದ ಸಿ.ಎಸ್.ಪುಟ್ಟರಾಜು

ರಾಜ್ಯ(ಮಂಡ್ಯ)ಸೆ.25:- ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನವಾಗಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕವನ್ನು ಸಂಸದ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು.

ನಂತರ ಮಾತನಾಡಿದ ಸಂಸದ ಸಿ.ಎಸ್.ಪುಟ್ಟರಾಜು, ಇತ್ತೀಚಿನ ದಿನಗಳಲ್ಲಿ ಅಶುದ್ದ ಕುಡಿಯುವ ನೀರಿನಿಂದಲೇ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಜನರು ಸಾಧ್ಯವಾದಷ್ಟು ಕಡ್ಡಾಯವಾಗಿ ಶುದ್ದ ಕುಡಿಯುವ ನೀರನ್ನೇ ಕುಡಿಯಬೇಕು. ಅದಕ್ಕಾಗಿಯೇ ಸರಕಾರಗಳು ಸಹ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಘಟಕಗಳನ್ನು ಪ್ರಾರಂಭಿಸುತ್ತಿದೆ ಎಂದರು.

ಕೆರೆತೊಣ್ಣೂರು ಗ್ರಾಮ ಪ್ರವಾಸಿ ತಾಣವಾಗಿರುವುದರಿಂದ ನಿತ್ಯ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘ ಶುದ್ದ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಿರುವುದು ಒಳ್ಳೆಯ ಕೆಲಸವಾಗಿದ್ದು ಸಾಕಷ್ಟು ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಚನ್ನಕೇಶವ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ನಿರ್ದೇಶಕ ಪ್ರಕಾಶ್, ಗ್ರಾಪಂ ಸದಸ್ಯೆ ಶೃತಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: