ಮೈಸೂರು

ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡುವ ಅಗತ್ಯವಿದೆ : ಸಚಿವ ಬಿ.ರಮಾನಾಥ ರೈ

ಪರಿಸರ ಅಭಿವೃದ್ಧಿಗೆ ಕೆರೆ ಸಂರಕ್ಷಣೆ ಅತ್ಯಗತ್ಯ. ಹೀಗಾಗಿ ಕೆರೆಗಳ ಸಂರಕ್ಷಣೆಗೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ನೀರನ್ನು ಹಿಡಿದಿಡಲು ಹೆಚ್ಚಿನ ಕೆಲಸ ನಡೆಯಬೇಕಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ  ಸಚಿವ ಬಿ.ರಮಾನಾಥ ರೈ ಹೇಳಿದರು.

ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನ ಸಭಾಂಗಣದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಮೈಸೂರು-ನಂಜನಗೂಡು ಕೆರೆಗಳ ಸಂಶೋಧನಾ ವರದಿಯನ್ನು ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಅಮೂಲ್ಯವಾದ ನೀರನ್ನು ಭೂಮಿಯ ಮೇಲೆ ಹಿಡಿದಿಟ್ಟುಕೊಳ್ಳುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಬೇಕಿದೆ. ಸರ್ಕಾರ ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮರಳಿ ಕೆರೆಗಳು ಎಂಬ ಯೋಜನೆಯಡಿಯಲ್ಲಿ ಕೆರೆಗಳನ್ನು ಪುನಶ್ಚೇತನಗೊಳಿಸುವ ಕೆಲಸ ಮಾಡುತ್ತಿದ್ದು, ಕೆರೆಗಳನ್ನು ಪೂರ್ವಸ್ಥಿತಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಮೈಸೂರು-ನಂಜನಗೂಡು ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ 69ಕೆರೆಗಳ ಪುನಶ್ಚೇತನಕ್ಕೆ ಮುಂದಾಗಬೇಕಿದ್ದು, ಅಧ್ಯಯನ ವರದಿಯಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಎಂದರು.

ಬೆಂಗಳೂರಿನ ಎಂಪ್ರಿ ಸಂಸ್ಥೆ(ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ) ಮೈಸೂರು-ನಂಜನಗೂಡು ಕೆರೆಗಳ ಕುರಿತು ಅಧ್ಯಯನ ನಡೆಸಿ ಸಲ್ಲಿಸಲಿರುವ ಸಂಶೋಧನಾ ವರದಿಯನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಂಪ್ರಿ ನಿರ್ದೇಶಕ ಕೆ.ಎಚ್.ವಿನಯಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್, ಮೇಯರ್ ಬಿ.ಎಲ್.ಭೈರಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: