ಕರ್ನಾಟಕಮೈಸೂರು

ಸೆ.26 ರಂದು ಮಹಾತ್ಮ ಗಾಂಧಿ ಮಹಾ ಸ್ವಚ್ಛತಾ ಅಭಿಯಾನ

ಮಂಡ್ಯ, ಸೆ.25: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ಮಹಾ ಸ್ವಚ್ಛತಾ ಅಭಿಯಾನ ಹಾಗೂ ಶ್ರಮದಾನ ಉದ್ಘಾಟನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ಯತ್ತಗದಹಳ್ಳಿ ಗ್ರಾಮದ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ನಡೆಸಿಕೊಡಲಿದ್ದು, ಬೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಯಿಗಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಂಡ್ಯ ತಾಲ್ಲೂಕು ತಹಶೀಲ್ದಾರರಾದ ಎಲ್.ನಾಗೇಶ್ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡುವರು.

(ಎನ್.ಬಿ)

Leave a Reply

comments

Related Articles

error: