ಮೈಸೂರು

ಸೆ.೨೬, ೨೭ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರಗೋಷ್ಠಿ: ರಂದೀಪ್

ಮೈಸೂರು, ಸೆ.೨೫: ನಾಡಹಬ್ಬ, ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಸೆ.೨೬ ಹಾಗೂ ೨೭ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವವನ್ನು ಸಂವಿಧಾನ-ಪ್ರಜಾಸತ್ತೆ-ಸಮಾನತೆ ಎಂಬ ಸಂದೇಶದ ಮೇಲೆ ಆಚರಿಸಲಾಗುತ್ತಿದೆ. ದಸರಾ ಅಂಗವಾಗಿ ಸಂವಿಧಾನ-ಪ್ರಜಾಸತ್ತೆ-ಸಮಾನತೆ: ಕರ್ನಾಟಕ ಒಂದು ಆದರ್ಶ ಮಾದರಿ ಎಂಬ ವಿಷಯದ ಮೇಲೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದ್ದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಸುಭ್ರೊ ಕಮಲ್ ಮುಖರ್ಜಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಹಿಸಲಿದ್ದಾರೆ. ಎರಡು ದಿನಗಳ ವಿಚಾರಗೋಷ್ಠಿಯಲ್ಲಿ ಎರಡು ಸರ್ವ ಸದಸ್ಯರ ಗೋಷ್ಠಿಗಳು ಮತ್ತು ನಾಲ್ಕು ಮುಖ್ಯಗೋಷ್ಠಿಗಳ ನಡೆಯಲಿವೆ. ಈ ಗೋಷ್ಠಿಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ಹೆಸರಾಂತ ಕಾನೂನು ತಜ್ಞರು, ವಿಚಾರವಾದಿಗಳು, ವಿದ್ವಾಂಸರು ಸೇರಿದಂತೆ ೧೫೦೦ ಆಹ್ವಾನಿತ ಪ್ರತನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸೋಮಶೇಖರ್, ಆಹಾರ ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಕಾ.ರಾಮೇಶ್ವರಪ್ಪ, ಗಾಂಧಿ ಅಧ್ಯಯನ ಭವನದ ನಿರ್ದೇಶಕ ಶಿವರಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: