ಪ್ರಮುಖ ಸುದ್ದಿ

ಬಿಎಸ್‌ವೈ ಕ್ಷೇತ್ರ ಅಂತಿಮ: ಉಮಾಶ್ರೀ ವಿರುದ್ಧ ಸ್ಪರ್ಧೆ

ಪ್ರಮುಖ ಸುದ್ದಿ, ಬೆಂಗಳೂರು, ಸೆ.೨೬: ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಕಮಲ ಅರಳಿದ್ದು ರಾಜ್ಯದಲ್ಲಿ ಶತಗತಾಯ ಅಧಿಕಾರದ ಗದ್ದುಗೆ ಹೇರಬೇಕು ಎಂದು ಪಣತೊಟ್ಟಿರುವ ಬಿಜೆಪಿ ನಾಯಕರು ತಮ್ಮ ಕ್ಷೇತ್ರವನ್ನು ಬದಲಾಯಿಸಲು ಮುಂದಾಗಿದ್ದಾರೆ.
ರಾಜ್ಯ ನಾಯಕರು ಎಂದು ಗುರುತಿಸಿಕೊಂಡಿರುವ ನಾಯಕರು ಹೈಕಮಾಂಡ್ ಸೂಚನೆಯಂತೆ ಯಾವ ಕ್ಷೇತ್ರದಲ್ಲಿ ಬೇಕಾದರೂ ನಿಲ್ಲಲು ಸಿದ್ಧರಿರಬೇಕು. ಅದರಂತೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಶಿಖಾರಿಪುರ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ರೆಡಿಯಾಗಿದ್ದಾರೆ. ತಾವು ಸ್ಪರ್ಧಿಸುವ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರವನ್ನು ಅಂತಿಮಗೊಳಿಸಿದ್ದು, ಸಚಿವೆ ಉಮಾಶ್ರೀ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಅವರು ಸ್ಪರ್ಧಿಸುವುದು ಅಂತಿಮವಾಗಿದ್ದು, ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಮಾಜಿ ಶಾಸಕ ಸಿದ್ದು ಸವದಿ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
೨೦೦೮ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಉಮಾಶ್ರೀ ಅವರನ್ನು ಸೋಲಿಸಿ ಬಿಜೆಪಿಯಿಂದ ಸಿದ್ದು ಸವದಿ ಆಯ್ಕೆಯಾಗಿದ್ದರು. ೨೦೧೩ರಲ್ಲಿ ಉಮಾಶ್ರೀ ಅವರು ಸಿದ್ದು ಸವದಿ ಅವರ ವಿರುದ್ಧ ಜಯಗಳಿಸಿ ಶಾಸಕಿಯಾಗಿ ಆಯ್ಕೆಯಾಗಿ ಸಚಿವೆಯಾಗಿದ್ದರು. ಕ್ಷೇತ್ರದಲ್ಲಿ ಲಿಂಗಾಯತ ಮತ್ತು ನೇಕಾರ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಮತ್ತು ನೇಕಾರ ಸಮುದಾಯದ ನಾಯಕಿ, ನಟಿ ಉಮಾಶ್ರೀ ಅವರ ನಡುವೆ ಪ್ರಬಲ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಚುನಾವಣೆಗೆ ಇನ್ನೂ ಸಮಯವಿದ್ದು ಕೊನೆಗಳಿಗೆಯಲ್ಲಿ ಕ್ಷೇತ್ರ ಬದಲಾವಣೆಯಾದರೂ ಆಗಬಹುದು. (ವರದಿ ಬಿ.ಎಂ)

 

Leave a Reply

comments

Related Articles

error: