ಮೈಸೂರು

ಬಿಳಿಕೆರೆ ಠಾಣೆಯಲ್ಲಿ ಸಿಸಿಟಿವಿ ಅಳವಡಿಕೆ

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯಲ್ಲಿನ ಮುಖ್ಯ ರಸ್ತೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಲ್ಲಿನ  ಆಗು-ಹೋಗುಗಳನ್ನು ವೀಕ್ಷಿಸಿ ತಕ್ಷಣ ಕಾರ್ಯಪ್ರವೃತ್ತರಾಗಲು ಠಾಣೆಯಲ್ಲಿಯೂ ಸಿಸಿಟಿವಿ ಅಳವಡಿಸಲಾಗಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಈ ಕ್ರಮಕ್ಕೆ ಮುಂದಾಗಿದ್ದಾರೆ. ಶುಕ್ರವಾರ ಸಿಸಿಟಿವಿಗೆ ಚಾಲನೆ ದೊರಕಿದೆ.

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯಲ್ಲಿನ ಮುಖ್ಯ ರಸ್ತೆಗಳಲ್ಲಿನ ಅಂಗಡಿಗಳಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಅವ್ಯಾಹತವಾಗಿ ಕಳ್ಳತನ ನಡೆಯುತ್ತಿತ್ತು. ಅಷ್ಟೇ ಅಲ್ಲದೇ ಅಕ್ರಮ ಮರಳು ಸಾಗಾಟವೂ ನಿರಂತರವಾಗಿ ನಡೆದಿತ್ತು. ಇದರಿಂದ ಸಾರ್ವಜನಿಕರು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರನ್ನು ನೀಡಿದ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯರಸ್ತೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪೊಲೀಸ್ ಠಾಣೆಗಳಲ್ಲಿಯೇ ಕುಳಿತು ಎಲ್ಲ ರೀತಿಯ ಚಲನವಲನಗಳನ್ನು ವೀಕ್ಷಿಸಲು ಸಿಸಿಟಿವಿಯನ್ನು ಅಳವಡಿಸಲಾಗಿದೆ.

ಇನ್ನು ಅಲ್ಲಿ ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಮತ್ತು ಅಕ್ರಮ ಮರಳುಸಾಗಾಟಕ್ಕೆ ಮುಕ್ತಿ ಸಿಗಲಿದೆ.

Leave a Reply

comments

Related Articles

error: