ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲು ಮುಂದಾದ ಎಸಿಬಿ

ರಾಜ್ಯ(ಬೆಂಗಳೂರು) ಸೆ.26:- ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಮತ್ತೊಂದು ಶಾಕ್ ನೀಡಲು ಭ್ರಷ್ಟಾಚಾರ ನಿಗ್ರಹ ದಳ ಮುಂದಾಗಿದೆ.

ಶಿವರಾಮ್‌ ಕಾರಂತ ಬಡವಾಣೆಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಂಡಿರುವ ಎಸಿಬಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲ್ಲಿಸುವಂತೆ ಮನವಿ ಮಾಡಿದ್ದಾರೆ.ಅಧಿಕಾರಿಗಳು ಸಲ್ಲಿಸಿರುವ ಪತ್ರದ ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳು ಮತ್ತು ಗೃಹಸಚಿವರ ಬಳಿ ಚರ್ಚೆ ನಡೆಸಿ ಕಾನೂನು ಸಲಹೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಶಿವರಾಮ್‌ಕಾರಂತ ಬಡವಾಣೆಯ ಡಿನೋಟಿಫಿಕೇಷನ್ ಪ್ರಕರಣದ ಸಂಬಂಧ ಈಗಾಗಲೇ ಒಂದು ಹಂತದ ತನಿಖೆ ಮಾಡಲಾಗಿದೆ.ಈ ಹಂತದಲ್ಲಿ ತಡೆಯಾಜ್ಞೆ ನೀಡಿರುವುದು ಸರಿಯಲ್ಲ. ಅಷ್ಟೇ ಅಲ್ಲದೆ ಆರೋಪಿತರು ಪ್ರಭಾವಿ ವ್ಯಕ್ತಿಯಾಗಿದ್ದು ಪ್ರಮುಖ ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದಾರೆ ಸಾಕ್ಷಿಗಳಿಗೆ ಬೆದರಿಕೆ ಹಾಗೂ ದಾಖಲಾತಿಗಳನ್ನು ನಾಶ ಮಾಡುವ ಸಾಧ್ಯತೆಯಿರುವುದನ್ನು ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಲಾಗಿತ್ತು.ಪ್ರಕರಣ ಕುರಿತು ಹೆಚ್ಚಿನ ತನಿಖೆ ಮಾಡುವ ಅಗತ್ಯವಿರುವುದರಿಂದ ಕೂಡಲೇ ತಡೆಯಾಜ್ಞೆ ತೆರುವುಗೊಳಿಸಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮನವಿ ಮಾಡಲಾಗಿದೆ.ಮುಖ್ಯಮಂತ್ರಿಗಳು ಅನುಮತಿ ನೀಡಿದರೆ ಇದೇ ವಾರದಲ್ಲಿ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಮೇಲ್ಮನವಿ ಸಲ್ಲಿಸಲ್ಲಿಸಲಾಗುವುದು ಎಂದು ಎಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: