ಮೈಸೂರು

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಳೆದ ಹಲವಾರು ದಿನಗಳಿಂದ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿನ ಜನರಿಗೆ ಕಾಟ ಕೊಡುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನ ಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಇರಿಸಲಾದ ಬೋನಿಗೆ ಎರಡು ವರ್ಷದ ಗಂಡು ಚಿರತೆ  ಬಿದ್ದಿದೆ. ಚಿರತೆಯು ಬೀಚನಹಳ್ಳಿ ಜನರನ್ನಷ್ಟೇ ಅಲ್ಲದೇ ಅಲ್ಲಿನ ಜಾನುವಾರುಗಳ ಮೇಲೆಯೂ ದಾಳಿ ನಡೆಸಿತ್ತು. ಗ್ರಾಮಸ್ಥರು ಚಿರತೆ ಹಾವಳಿಯಿಂದ ಕಂಗಾಲಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ದೂರು ನೀಡಿದ್ದರು. ಗ್ರಾಮಸ್ಥರ ದೂರನ್ನು ಆಲಿಸಿದ ಅರಣ್ಯ ಇಲಾಖಾ ಸಿಬ್ಬಂದಿಗಳು ಕಬಿನಿ ಜಲಾಶಯದ ಬಳಿ ಚಿರತೆಯನ್ನು ಹಿಡಿಯಲು ಬೋನನ್ನು ಇರಿಸಿದ್ದರು. ಶುಕ್ರವಾರ ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದಿರುವ ಚಿರತೆಯನ್ನು ಅರಣ್ಯ ಇಲಾಖಾ ಸಿಬ್ಬಂದಿಗಳು ಕೊಂಡೊಯ್ದು  ಅರಣ್ಯದೊಳಗೆ ಬಿಟ್ಟಿದ್ದಾರೆ.

Leave a Reply

comments

Related Articles

error: