ಮೈಸೂರು

ಮಳೆ ಅವಾಂತರ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಮಹದೇವಪ್ಪ

ಮೈಸೂರು, ಸೆ.೨೭: ಮಂಗಳವಾರ ಸಂಜೆಯಿಂದ ಮೈಸೂರಿನಲ್ಲಿ ಎಡೆಬಿಡದೇ ಸುರಿದ ಭಾರಿ ಮಳೆಯಿಂದ ಆಗಿರುವ ಸಮಸ್ಯೆಗಳನ್ನು ಪರಿಶೀಲಿಸಿ ತುರ್ತು ಕ್ರಮವಹಿಸುವಂತೆ ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಜಿಲ್ಲಾಧಿಕಾರಿ ರಂದೀಪ್ ಡಿ., ಮಹಾನಗರ ಪಾಲಿಕೆ ಆಯುಕ್ತ ಜಿ.ಜಗದೀಶ್, ಅಧೀಕ್ಷಕ ಇಂಜಿನಿಯರ್ ಸುರೇಶ್ ಬಾಬು ಅವರಿಗೆ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ನಗರದ ಹಲವು ಬಡಾವಣೆಗಳು ಜಲಾವೃತವಾಗಿವೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ಪರಿತಪಿಸುತ್ತಿದ್ದಾರೆ. ಮನೆಗಳ ಗೋಡೆ ಕುಸಿದು ಅಪಾರ ಹಾನಿಯಾಗಿದೆ. ಈ ಹಿನ್ನೆಲೆಉಲ್ಲಿ ಪಾಲಿಕೆ ಆಯುಕ್ತ ಜಿ.ಜಗದೀಶ್ ಅವರು, ಬೆಳಗ್ಗೆಯಿಂದ ಶ್ರೀರಾಂಪುರ, ನಿವೇದಿತ ನಗರ, ಬೋಗಾದಿ, ಶಾರದದೇವಿ ನಗರ, ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲಾಧಿಕಾರಿ ರಂದೀಪ್ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿರುವ ಮಹದೇವಪ್ಪ ಅವರು, ಎಲ್ಲೆಲ್ಲಿ ಹಾನಿಯಾಗಿದೆ ಆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. (ವರದಿ ಬಿ.ಎಂ)

 

Leave a Reply

comments

Related Articles

error: