ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು, ಸೆ.27 (ಪ್ರಮುಖ ಸುದ್ದಿ) : ರಾಜ್ಯ ಸರ್ಕಾರಿ ನೌರರರಿಗೆ ದಸರಾ ಉಡುಗೊರೆಯಾಗಿ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. ಈ ಬಗ್ಗೆ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು 6 ಲಕ್ಷ ನೌರರು ಈ ಸೌಲಭ್ಯದ ಅನುಕೂಲ ಪಡೆಯಲಿದ್ದಾರೆ.

ರಾಜ್ಯದಲ್ಲಿ ಹಣಕಾಸು ಖಾತೆಯನ್ನೂ ನಿಭಾಯಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದ್ದಾರೆ. ಮೂಲ ವೇತನದ ಶೇ.4.25 ರಷ್ಟು ಹೆಚ್ಚಳ ಮಾಡಲಾಗಿದ್ದು, ಜುಲೈ 1 ರಿಂದಲೇ ಪೂರ್ವಾನ್ವಯವಾಗಿ ಜಾರಿಯಾಗಲಿದೆ. ಸರ್ಕಾರದ ಬೊಕ್ಕಸಕ್ಕೆ 660 ಕೋಟಿ ರೂ.ಗಳಷ್ಟು ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

(ಎನ್.ಬಿ)

Leave a Reply

comments

Related Articles

error: