ಮೈಸೂರು

ಮಳೆಯಿಂದಾಗಿ ಮನೆ ಕುಸಿತ: ಪ್ರಾಣಾಪಾಯದಿಂದ ಪಾರು

ಮೈಸೂರು,ಸೆ.28-ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿಥಿಲಗೊಂಡಿದ್ದ ಹಂಚಿನ ಮನೆ ಕುಸಿದಿರುವ ಘಟನೆ ಗುರುವಾರ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಸಂಭವಿಸಿದೆ. ಈ ಅಪಘಾತ ನಡೆದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ನಗರದ ನಜರ್ ಬಾದ್ ನ ಜಟ್ಟಿ ಬೀದಿಯ ನಿವಾಸಿ ರಾಜೇಶ್ ಅಲಿಯಾಸ್ ಬಾಬು ಎಂಬವರ ಮನೆ ಮಳೆಯಿಂದಾಗಿ ಕುಸಿದಿದ್ದು, ಗೋಡೆ ಕುಸಿಯುತ್ತಿದ್ದಂತೆ ಎಚ್ಚರಗೊಂಡ ಮನೆಯವರು ತಕ್ಷಣ ಮನೆಯಿಂದ ಹೊರ ಓಡಿಬಂದಿದ್ದಾರೆ. ಹೀಗಾಗಿ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: