ಮೈಸೂರು

ಮಧುರಗಾನ ಕಲಾವೃಂದದಿಂದ ರಸಮಂಜರಿ ನ.7ರಂದು

ಮಧುರಗಾನ ಕಲಾವೃಂದದ ವತಿಯಿಂದ 61 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಡಾ.ರಾಜ್ ಕುಮಾರ್ ಮತ್ತು ಜಿ.ಕೆ. ವೆಂಕಟೇಶ್ ರವರ ‘ಎರಡು ನಕ್ಷತ್ರಗಳ’ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಧುರ ಕಲಾವೃಂದದ ಸಂಸ್ಥಾಪಕ ರಮೇಶ್ ಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನವೆಂಬರ್ 7 ರಂದು ಸಂಜೆ 5.30 ಕ್ಕೆ ಜಗನ್ಮೋಹನ ಅರಮನೆಯಲ್ಲಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿವಿಯ ಕುಲಪತಿ ಡಾ. ಸರ್ವಮಂಗಳಾ ಶಂಕರ್, ವಂಗೀಪುರ ನಂಬಿಮಠದ  ಇಳೈ ಆಳ್ವಾರ್ ಸ್ವಾಮೀಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್. ರವಿಶಂಕರ್ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರು ನಗರದ ನೂತನ ಪೊಲೀಸ್ ಕಮಿಷನರ್ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಸಸ್ಮಾನಿಸಲಾಗುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗಾಯಕರಾದ ಆರ್. ನಟರಾಜ್, ಆರ್.ಸುಧೀಂದ್ರ, ಸಂಸ್ಥೆಯ ಪೋಷಕರಾದ ರಾಜೇಶ್ವರಿ ರಮೇಶ್ ಕುಮಾರ್ ಮತ್ತು ಐಶ್ವರ್ಯ ಲಕ್ಷ್ಮಿ ಹಾಜರಿದ್ದರು.

Leave a Reply

comments

Related Articles

error: