ಕರ್ನಾಟಕಮೈಸೂರು

ಅ.2ರಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಡ್ಯ, ಸೆ.29 : ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ಅ.2 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಅವರು ಬೆಳಿಗ್ಗೆ 10.30 ಗಂಟೆಗೆ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬೆಳಿಗ್ಗೆ 11 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಮಾತೃಪೂರ್ಣ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ಗಾಂಧಿ ಭವನಕ್ಕೆ ಭೇಟಿ ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: