ಮೈಸೂರು

ಮೈಸೂರಿನಲ್ಲಿ ಮುಖ್ಯಮಂತ್ರಿ : ಸೆ.30ರ ಕಾರ್ಯಕ್ರಮ ವಿವರ

ಮೈಸೂರು, ಸೆ.29 : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆ.30 ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12-15 ಗಂಟೆಗೆ ಅರಮನೆ ಆವರಣದಲ್ಲಿ ಬಲರಾಮ ದ್ವಾರದಲ್ಲಿ ನಂದೀಧ್ವಜ ಪೂಜೆಯಲ್ಲಿ ಭಾಗವಹಿಸುವರು.

ಸಂಜೆ 4-45 ಗಂಟೆಗೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತ್ ವೀಕ್ಷಣೆ (ಟಾರ್ಜ್‍ಲೈಟ್ ಪೆರೇಡ್) ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅ.1 ರಂದು ಬೆಳಿಗ್ಗೆ 10-30 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ಜಿಲ್ಲೆಗೆ ತೆರಳುವರು.

(ಎನ್.ಬಿ)

Leave a Reply

comments

Related Articles

error: