ದೇಶಪ್ರಮುಖ ಸುದ್ದಿ

ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ದೇಶ(ನವದೆಹಲಿ)ಸೆ.30:- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಅರುಣಾಚಲಪ್ರದೇಶದಲ್ಲಿಯೂ ಹೊಸ ಉಪರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸತ್ಯಪಾಲ್ ಮಲಿಕ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿಯೂ, ಪ್ರೊ.ಜಗದೀಶ್ ಮುಖಿ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿಯೂ, ಬನ್ವಾರಿ ಲಾಲ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿಯೂ ನೇಮಕ ಮಾಡಲಾಗಿದೆ. ಇದುವರೆಗೆ ಮಹಾರಾಷ್ಟ್ರದ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರು ಹೆಚ್ಚುವರಿಯಾಗಿ ತಮಿಳುನಾಡಿನ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಗಂಗಾಪ್ರಸಾದ ಅವರು ಮೇಘಾಲಯದ ರಾಜ್ಯಪಾಲರಾಗಿಯೂ, ಬಿ.ಡಿ.ಮಿಶ್ರಾ ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿಯೂ, ಅಡ್ಮಿರಲ್ ದೇವೇಂದ್ರ ಕುಮಾರ್ ಅವರನ್ನು ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ನಿಕೋಬಾರ್ ಗೆ ಲೆಫ್ಟಿನೆಂಟ್ ಗವರ್ನರ್ ನ್ನಾಗಿ ನೇಮಕ ಮಾಡಿದ್ದಾರೆ. (ಎಸ್.ಎಚ್)

Leave a Reply

comments

Related Articles

error: